ಮೈಸೂರು: ಪ್ರತಿಷ್ಠಿತ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರ ಗುರು (68) ಹೃದಯಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರಿಗೆ ಇಂದು ಸಂಜೆ ೭. ೩೦ ರ ಸುಮಾರಿಗೆ ಹೃದಯಘಾತ ಸಂಭವಿಸಿ ಮೃತಪಟ್ಟರು.
೮೦ ರ ದಶಕದಲ್ಲಿ ಹೈದರಬಾದ್ ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹುದ್ದೆ ಆರಂಭಿಸಿದ ಪ್ರೊ.ಮಹೇಶ್ ಚಂದ್ರ ಗುರು ಬಳಿಕ ಮಂಗಳೂರು ವಿವಿಯಲ್ಲಿ ಜರ್ನಲಿಸಂ ಪ್ರಾಧ್ಯಾಪಕಾರಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪಾದರ್ಪಣೆ. ಬಳಿಕ ಮೈಸೂರು ವಿವಿಗೆ ವರ್ಗಾವಣೆಗೊಂಡು ೨೦೧೯ ರಲ್ಲಿ ಸೇವೆಯಿಂದ ನಿವೃತ್ತರಾದರು.
ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ನಾಡ ಹಬ್ಬ ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರ ಪಾತ್ರ ಪ್ರಮುಖವಾದದ್ದು.