ಮನೆ ಸ್ಥಳೀಯ ಮೈಸೂರು: ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಯಡಿಯೂರಪ್ಪ ಬೆಂಬಲ

ಮೈಸೂರು: ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಯಡಿಯೂರಪ್ಪ ಬೆಂಬಲ

0

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿ ಬೆಂಬಲ ಸೂಚಿಸಿದರು.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ, ‘ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರದ ಪ್ರತಿನಿಧಿಗಳು, ಅಧಿಕಾರಿಗಳು ಬಂದು ಅಹವಾಲು ಸ್ವೀಕರಿಸದಿರುವುದು ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ನೌಕರರ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ‘ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರ ಹೋರಾಟದ ಧ್ವನಿಯನ್ನು ವಿಧಾನಸಭೆಗೆ ಮುಟ್ಟಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡುತ್ತವೆ, ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ಮೈಸೂರು ನೀಡಿದೆ. ಇಲ್ಲಿನ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ರಾಜ್ಯದ ಜನರ ಆರೋಗ್ಯ ಕಾಪಾಡಲು ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುವ ಪಾಲಿಕೆ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಸರ್ಕಾರ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು. ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಅಪ್ಪಣ್ಣ ಮತ್ತಿತರರು ಭಾಗವಹಿಸಿದ್ದರು.