ಮೈಸೂರು(Mysuru): ಕೊಲೆಯಾದ ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ನಿಷೇಧಿತ ಪಿಎಫ್’ಐ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೆ ಮೇಲೆ ಎನ್’ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ದಾಳಿ ನಡೆಸಿದೆ.
ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ರಾಜ್ಯದ ಹಲವು ಕಡೆ ಎನ್ಐಎ ದಾಳಿ ನಡೆಸಿದೆ.
ಮೈಸೂರಿನ ಮಂಡಿ ಮೋಹಲ್ಲಾದಲ್ಲಿರುವ ನಿಷೇಧಿತ ಪಿಎಫ್ಐ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಸುಲೆಮಾನ್ ಎಂಬುವರ ಮನೆ ಮೇಲೆ ಸಹ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರೆಸಿದ್ದಾರೆ. ಅಲ್ಲದೇ, ಸುಲೆಮಾನ್ ದೂರವಾಣಿ ಕರೆ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
Saval TV on YouTube