ಮನೆ ರಾಜ್ಯ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಪ್ರಿಂಟ್​​ ಮಿಸ್ಟೇಕ್​ ಆಗಿದೆ ಎಂದು ಶಿವರಾಜ್​ ತಂಗಡಗಿ ಸ್ಪಷ್ಟನೆ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಪ್ರಿಂಟ್​​ ಮಿಸ್ಟೇಕ್​ ಆಗಿದೆ ಎಂದು ಶಿವರಾಜ್​ ತಂಗಡಗಿ ಸ್ಪಷ್ಟನೆ

0

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.

ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ ಎಲ್ಲಾ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು.

ಇನ್ನು ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ ವಿಚಾರವಾಗಿ ಮಾತನಾಡಿದ ಅವರು, ಸದನದಲ್ಲಿ ಚರ್ಚೆ ಆಗಿದೆ. ಕೈಗಾರಿಗೆಗಳಿಗೂ ಹೆಸರು ಹಾಕುವ ಪದ್ದತಿ ಬರುತ್ತಿದೆ. ವಿಧಾನಸೌಧದ ಮುಂಭಾಗ ಭುವನೇಶ್ವರಿ ದೇವಿ ಪ್ರತಿಮೆ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಅದರ ಬಗ್ಗೆ ಚರ್ಚೆ ಆಗುತ್ತಿದೆ. ವಿಧಾನಸೌಧ ಮುಂಭಾಗದಲ್ಲಿ ಜಾಗ ಗುರುತಿಸಲಾಗಿದೆ. ಆದಷ್ಟು ಬೇಗ ಇದರ ಬಗ್ಗೆ ಮಾಹಿತಿ ಒದಗಿಸುತ್ತೇವೆ ಎಂದರು.