ಮನೆ ಸುದ್ದಿ ಜಾಲ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ: ಕವಿತಾ ರಾಜಾರಾಮ್

ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ: ಕವಿತಾ ರಾಜಾರಾಮ್

0

ಮೈಸೂರು: ನಾಡಪ್ರಭು ಕೆಂಪೇಗೌಡ ಅವರ 514 ನೇ ಜಯಂತಿಯನ್ನು ಎಲ್ಲಾ ವರ್ಗದವರು ಜೊತೆಗೂಡಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಅವರು ತಿಳಿಸಿದರು.

Join Our Whatsapp Group

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಕಲಾ ಮಂದಿರದಲ್ಲಿ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡಲಾಗುವುದು. ಅಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಅವರದಿಂದ ಬೆಳಗ್ಗೆ 10 ಗಂಟೆಗೆ ಮೆರವಣಿಗೆ ಆರಂಭಗೊಂಡು ಕಲಾ ಮಂದಿರದವರೆಗೂ ಮೆರವಣಿಗೆ ಸಾಗಲಿದೆ. ಮದ್ಯಾಹ್ನ 12 ಗಂಟೆಗೆ ಕರ್ನಾಟಕ ಕಲಾ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಉಳಿದಂತೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಂಶಗಳನ್ನು ಜಿಲ್ಲಾ ಶಿಸ್ಟಾಚಾರದಂತೆ ನಡೆಸಲಾಗುವುದು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ಅವರು ಮಾತನಾಡಿ ಅಗತ್ಯ ಸಂಖ್ಯೆಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಲಾ ಗುವುದು. ಮೆರವಣಿಗೆ ಹಾಗೂ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಕುಡಿಯುವ ನೀರು ಹಾಗೂ ಶಾ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಲಾಗುವುದು. ಕಾರ್ಯಕ್ರಮ ಆಯೋಜನೆಗೆ ಸರ್ಕಾರದಿಂದ 50 ಸಾವಿರ ಅನುಧಾನವಿದ್ದು ಸರ್ಕಾರದ ನಿಯಮಾವಳಿಗಳ ಅನ್ವಯ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ ಮುಖಂಡರುಗಳು ಕಲಾ ತಂಡಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಬೇಕು ಮತ್ತು ಎಲ್ಲಾ ಸಮುದಾಯದವರು ಜಯಂತಿಯಲ್ಲಿ ಶಿಷ್ಟಾಚಾರದ ಅನ್ವಯ ಪಾಲ್ಗೊಳುವಂತೆ ತಿಳಿಸಬೇಕೆಂದು ಮನವಿ ಮಾಡಿಕೊಂಡರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಂಡಿಕೆರೆ ಗೋಪಾಲ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಕನ್ನಡ ಚಳುವಳಿ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸಮುದಾಯಗಳ ಮುಖಂಡರು ಪಾಲ್ಗೊಂಡಿದ್ದರು.

ಹಿಂದಿನ ಲೇಖನಸರಕು ಸಾಗಾಣಿಕೆ ಟೆಂಪೋ ಡಿಕ್ಕಿ:ಬಾಲಕಿ ಸಾವು
ಮುಂದಿನ ಲೇಖನನೆನೆವೆನನುದಿನ ನೀಲ