ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು.
ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು.

ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.















