ಮನೆ ಉದ್ಯೋಗ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ನವೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 28, 2022ಕ್ಕೆ 63 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಸ್ಕ್ರೀನಿಂಗ್

ಶಾರ್ಟ್ಲಿಸ್ಟಿಂಗ್

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 28,2022ಕ್ಕೆ ಮುನ್ನ ಕಳುಹಿಸಬೇಕು.

ಸೀನಿಯರ್ ಕಂಟ್ರೋಲರ್ ಆಫ್ ಅಡ್ಮಿನಿಸ್ಟ್ರೇಷನ್

CSIR-NAL,

P.B.No. 1779,

ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆ,

ಕೋಡಿಹಳ್ಳಿ,

ಬೆಂಗಳೂರು-560017

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022

ಅರ್ಜಿ ಸಲ್ಲಿಸಲು ಕೊನೆ ದಿನ: 18/11/2022