ಮನೆ ರಾಜ್ಯ ನಳಿನ್ ಕುಮಾರ್ ಕಟೀಲ್, ಡಿವಿಎಸ್ ಬ್ಯಾನರ್’ಗೆ ಚಪ್ಪಲಿ ಹಾರ ಹಾಕಿದ ಆರೋಪಿಗಳ ಮೇಲೆ ಪೊಲೀಸರ ಹಲ್ಲೆ...

ನಳಿನ್ ಕುಮಾರ್ ಕಟೀಲ್, ಡಿವಿಎಸ್ ಬ್ಯಾನರ್’ಗೆ ಚಪ್ಪಲಿ ಹಾರ ಹಾಕಿದ ಆರೋಪಿಗಳ ಮೇಲೆ ಪೊಲೀಸರ ಹಲ್ಲೆ ಆರೋಪ

0

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಅವರ ಬ್ಯಾನರ್’​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ ಪುತ್ತೂರಿನಲ್ಲಿ ವರದಿಯಾಗಿತ್ತು, ಈ ಬೆನ್ನಲ್ಲೇ ಆರೋಪಿಗಳ ಮೇಲೆ ಪೊಲೀಸರು ತೀವ್ರಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Join Our Whatsapp Group

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್​ ನಿಲ್ದಾಣದ ಬಳಿಯಲ್ಲಿ ರಾತ್ರೋರಾತ್ರಿ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದರು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದಿದ್ದ ಪೋಲೀಸರು ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಲಾಗಿದೆ. ರಕ್ತ ಒಸರುವಷ್ಟು ಪೊಲೀಸರು ಥಳಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಆರೋಪಿಗಳು ಗಾಯಗೊಂಡಿರುವ ಹಾಗೂ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ವಿರುದ್ಧವೇ ನಿರ್ಗಮಿತ ಶಾಸಕ ಸಂಜೀವ ಮಠಂದೂರು ಹಾಗೂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ಹರಿದಾಡಿತ್ತು. ಇದಕ್ಕೂ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿತ್ತು.

ಹಿಂದಿನ ಲೇಖನನಾನು ನಂಬಿದವರೇ ಕತ್ತು ಕೊಯ್ದರು: ಲಿಂಗಾಯತ ಮುಖಂಡರ ವಿರುದ್ಧ ವಿ. ಸೋಮಣ್ಣ ಕಿಡಿ
ಮುಂದಿನ ಲೇಖನಅನೈತಿಕ ಸಂಬಂಧದ ಶಂಕೆ: ಪತ್ನಿ ಮಲಗಿದ್ದಾಗ ಕತ್ತು ಹಿಸುಕಿ ಕೊಂದ ಪತಿ