ಮನೆ ರಾಜ್ಯ ಪ್ರವೀಣ್ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಧಿಕ್ಕಾರ ಕೂಗಿದ ಪಕ್ಷದ ಕಾರ್ಯಕರ್ತರು

ಪ್ರವೀಣ್ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಧಿಕ್ಕಾರ ಕೂಗಿದ ಪಕ್ಷದ ಕಾರ್ಯಕರ್ತರು

0

ಸುಳ್ಯ(Sullya): ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.

ಈ ಸಂದರ್ಭ ನಳಿನ್ ಕುಮಾರ್ ಕಟೀಲ್, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ ? ಎಂದು ಪ್ರಶ್ನಿಸಿದ ಅವರು, ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಬರ್ಬರವಾಗಿ ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿ ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು.

ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದರು.

ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು‌. ಸಂಘ ಪರಿವಾರಕ್ಕೆ ಸೇರಿದ ನೂರಾರು ಕಾರ್ಯಕರ್ತರು ಪ್ರವೀಣ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.