ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಸುತ್ತ ಸಾರ್ವಜನಿಕರು ಗುಂಪು–ಗುಂಪಾಗಿ ಸೇರಿತ್ತಿದ್ದಾರೆ. ಇದರಿಂದ, ಠಾಣೆಗೆ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ, ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ ಜೂನ್ 13ರಿಂದ 17ರವರೆಗೆ ಐದು ದಿನಗಳ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.














