ಮನೆ ರಾಜ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ನಿಯಮ ಉಲ್ಲಂಘಿಸಬಾರದು

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ನಿಯಮ ಉಲ್ಲಂಘಿಸಬಾರದು

0

ಬೆಂಗಳೂರು (Bengaluru): ರಾಜ್ಯದ ಎಲ್ಲ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ. ಕೆಲವು ಶಾಲೆಗಳಲ್ಲಿ ನಿಯಮ ಉಲ್ಲಂಘಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಲಾಗಿದೆ.

ರಾಜ್ಯದ ಎಲ್ಲ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಮುಂಜಾನೆ ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದೆ.

ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಞೆ ಬೋಧಿಸುವುದು, ಸಂವಿಧಾನ ಅನುಸರಿಸುವುದು, ಸಂವಿಧಾನದ ಆದರ್ಶಗಳನ್ನು ಪಾಲಿಸುವುದು, ಸಾಂವಿಧಾನಿಕ ಸಂಸ್ಥೆಗಳನ್ನು, ರಾಷ್ಟ್ರಧ್ವಜ, ರಾಷ್ಟ್ರಗೀತೆ ಗೌರವಿಸುವಂತೆ ಮಾಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮೈದಾನದ ಕೊರತೆ ಇದ್ದರೆ, ಕೊಠಡಿಗಳಲ್ಲೇ ಹಾಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಹಿಂದಿನ ಲೇಖನಇಂದಿನ ರಾಶಿ ಭವಿಷ್ಯ
ಮುಂದಿನ ಲೇಖನಇಂದಿನ ಹವಾಮಾನ ವರದಿ