ಬೆಂಗಳೂರು: ಜನವರಿ 24ರ ದಿನವಾದ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾಯಿಯಾಗಿ, ಸೋದರಿಯಾಗಿ, ಹೆಂಡತಿಯಾಗಿ, ಮಗಳಾಗಿ ಎಲ್ಲರ ಜೀವನದಲ್ಲಿ ಮಹತ್ತರ ಪಾತ್ರ ನಿಭಾಯಿಸುವವರೇ ಹೆಣ್ಣು ಮಕ್ಕಳು. ಅವರ ಪ್ರತಿಭೆ ಗುರುತಿಸಿ, ಯಾವುದೇ ಲಿಂಗ ತಾರತಮ್ಯ ಮಾಡದೇ ಅವರ ಸಾಧನೆಗೆ ಬೆನ್ನೆಲುಬಾಗಿ ನಿಲ್ಲೋಣ ಎಂದು ಶುಭಾಶಯ ಕೋರಿದ್ದಾರೆ.
ಮೋದಿ ಸರ್ಕಾರ ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಗೆ ತರಲಾಗಿದ್ದು, ಇವು ಮಹತ್ವದ ಮೈಲುಗಲ್ಲು ಸಾಧಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಟ್ವೀಟ್ ಮಾಡಿದ್ದಾರೆ.