ಮನೆ ಕಾನೂನು ಫೆ.11 ರಂದು ರಾಷ್ಟೀಯ ಲೋಕ ಅದಾಲತ್: ಕಕ್ಷಿಗಾರರು ಹಾಗೂ ಸಾರ್ವಜನಿಕರು ಸದುಯೋಗ ಪಡೆದುಕೊಳ್ಳಲು ಕರೆ

ಫೆ.11 ರಂದು ರಾಷ್ಟೀಯ ಲೋಕ ಅದಾಲತ್: ಕಕ್ಷಿಗಾರರು ಹಾಗೂ ಸಾರ್ವಜನಿಕರು ಸದುಯೋಗ ಪಡೆದುಕೊಳ್ಳಲು ಕರೆ

0

ಮೈಸೂರು(Mysuru): ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಫೆ.11 ರಂದು ರಾಷ್ರ್ಟೀಯ ಲೋಕ್ ಅದಾಲತ್ ನ್ನು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಹಮ್ಮಿಕೊಂಡಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್. ಸಂಗ್ರೇಶಿ ತಿಳಿಸಿದರು.

ನಗರದ ನ್ಯಾಯಾಲಯಗಳ ಸಂಕೀರ್ಣ ಕಛೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮೈಸೂರು ನಗರ  ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,11,492 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 59,872 ಸಿವಿಲ್ ಪ್ರಕರಣಗಳು ಹಾಗೂ 62,403 ಕ್ರಿಮಿನಲ್ ಪ್ರಕರಣಗಳಿದ್ದು, ಸದರಿ ಪ್ರಕರಣಗಳಲ್ಲಿ 34,739 ಇತ್ಯರ್ಥವಾಗುವ ಸಂಭವವಿದ್ದು, ಅವುಗಳ ಪೈಕಿ ಈಗಾಗಲೇ 19,586 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳು ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

ರಾಜಿಯಾಗುವಂತಹ ಯಾವುದೇ ಪ್ರಕರಣಗಳನ್ನು ಕಕ್ಷಿಗಾರರ ವಿನಂತಿಯ ಮೇರೆಗೆ ಸಂಬಂಧಪಟ್ಟ ನ್ಯಾಯಾಲಯಗಳಲ್ಲಾಗಲೀ ಅಥವಾ ಜಿಲ್ಲಾ ಕಾನೂನು ಸೇವೇಗಳ ಪ್ರಾಧಿಕಾರ ಅಥವಾ ಸಂಬಂಧಪಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸದಲ್ಲಿ, ಅಂತಹ ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಮಹಾದೇವಸ್ವಾಮಿ, ಉಪಾಧ್ಯಕ್ಷರಾದ ಪುಟ್ಟ ಸಿದ್ದೆಗೌಡ, ಕಾರ್ಯದರ್ಶಿ ಎಸ್.ಉಮೇಶ್ ಉಪಸ್ಥಿತರಿದ್ದರು.

ಹಿಂದಿನ ಲೇಖನಕಲುಷಿತ ಆಹಾರ ಸೇವನೆ: ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು ಅಸ್ವಸ್ಥ
ಮುಂದಿನ ಲೇಖನಬೈಕ್’ಗೆ ಪೊಲೀಸ್ ಜೀಪ್ ಡಿಕ್ಕಿ: ಸವಾರ ಸಾವು