ಮನೆ ಸುದ್ದಿ ಜಾಲ ರಾಷ್ಟ್ರೀಯ ಮತದಾರರ ದಿನಾಚರಣೆ

ರಾಷ್ಟ್ರೀಯ ಮತದಾರರ ದಿನಾಚರಣೆ

0

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ವಿವಿಯ ಸಿಬ್ಬಂದಿಗೆ ಮೈವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಪ್ರತಿಜ್ಞಾವಿಧಿ ಬೋಧಿಸಿದರು.

“ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ’ ಎಂದು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

1950ರ ಜನವರಿ 25ರಂದು ಭಾರತದ ಚುನಾವಣಾ ಆಯೋಗ ಸ್ಥಾಪನೆಯಾಗಿದೆ. ಹೀಗಾಗಿ ಈ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. 2011 ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಎಂದು ಘೋಷಿಸಿ ಮತದಾನಕ್ಕೊಂದು ಮುನ್ನುಡಿ ಬರೆಯಲಾಗಿದೆ. ಬಳಿಕ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ 12ನೇ ರಾಷ್ಟ್ರೀಯ ಮತದಾರರ ದಿನ.

ಹಿಂದಿನ ಲೇಖನಶೀಘ್ರದಲ್ಲೇ 777ನ ಚಾರ್ಲಿ ಬಿಡುಗಡೆ: ರಕ್ಷಿತ್ ಶೆಟ್ಟಿ
ಮುಂದಿನ ಲೇಖನಮಂಡ್ಯ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸರ್ವೇ ಅಧಿಕಾರಿ