ಮನೆ ರಾಷ್ಟ್ರೀಯ ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ: ಪ್ರಧಾನಿ ಮೋದಿ

ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ: ಪ್ರಧಾನಿ ಮೋದಿ

0

ಕೆವಾಡಿಯಾ (ಗುಜರಾತ್‌): ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

Join Our Whatsapp Group

 ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನದ ಪರೇಡ್‌ನಲ್ಲಿ ಮಾತನಾಡಿದ ಅವರು, ‘ಅವರು (ನಗರ ನಕ್ಸಲರು) ಅಭಿವೃದ್ಧಿ ಭಾರತದ ವಿರುದ್ಧವಾಗಿ  ಜನರನ್ನು ಜಾತಿ ಆಧಾರದಲ್ಲಿ ಒಡೆಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಒಗ್ಗಟ್ಟಾಗಿರುವುದರಿಂದ ನಾವೆಲ್ಲಾ ಸುರಕ್ಷಿತವಾಗಿರುತ್ತೇವೆ ಎಂದು ಹೇಳುವವರನ್ನು ನಗರ ನಕ್ಸಲರು ಗುರಿಯಾಗಿಸುತ್ತಾರೆ’ ಎಂದು ನುಡಿದಿದ್ದಾರೆ.

ಸರ್ಕಾರದ ಪ್ರಯತ್ನದಿಂದಾಗಿ ನಕ್ಸಲಿಸಂ ದೇಶದಲ್ಲಿ ಕೊನೆಯುಸಿರೆಳೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾಷಣಕ್ಕೂ ಮುನ್ನ, ದೇಶದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆಯ ಅಂಗವಾಗಿ ಏಕತಾ ಮೂರ್ತಿಗೆ ಪುಷ್ಪನಮನ ಸಲ್ಲಿಸಿದರು.