ಮನೆ ಉದ್ಯೋಗ ಮೈಸೂರು: ಎನ್’ಸಿ’ಆರ್’ಟಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು: ಎನ್’ಸಿ’ಆರ್’ಟಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಸಹಾಯಕ ಪ್ರೊಫೆಸರ್, ಲೈಬ್ರರಿಯನ್ ಸೇರಿದಂತೆ ಒಟ್ಟು 292 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು, ದೆಹಲಿ ಸೇರಿದಂತೆ ವಿವಿಧ ಕಡೆಗಳ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 28 ಆಗಿದೆ.

ಸಂಸ್ಥೆಯ ಹೆಸರು: ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್

ಹುದ್ದೆಯ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್

ಹುದ್ದೆಗಳ ಸಂಖ್ಯೆ: 292

ಉದ್ಯೋಗ ಸ್ಥಳ: ನವದೆಹಲಿ – ಅಜ್ಮೀರ್ – ಭುವನೇಶ್ವರ – ಮೈಸೂರು

ವೇತನ: 57700-144200 ರೂ ಪ್ರತಿ ತಿಂಗಳು

ವಯಸ್ಸಿನ ಮಿತಿ: ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಮತ್ತು ಟ್ರೈನಿಂಗ್ ನೇಮಕಾತಿ ಅಧಿಸೂಚನೆಯ ಪ್ರಕಾರ  ವಯಸ್ಸಿನ ಮಿತಿಯನ್ನು ಹೊಂದಿರಬೇಕು

ವಯೋಮಿತಿ ಸಡಿಲಿಕೆ:

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಕೆ: ಆನ್ಲೈನ್

ಅರ್ಜಿ ಶುಲ್ಕ:

ಪ.ಜಾ, ಪ.ಪಂ ಮತ್ತು ವಿಕಲಚೇತನ  ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 1000 ರೂ

ಪಾವತಿ ವಿಧಾನ: ಆನ್ಲೈನ್

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಅಕ್ಟೋಬರ್ 2022

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಅಕ್ಟೋಬರ್ 2022

ಅಧಿಕೃತ ವೆಬ್ಸೈಟ್: ncert.nic.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್ಲೋಡ್ ಮಾಡಿ

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಕ್ಲಿಕ್ ಮಾಡಿ.