ಮನೆ ಸುದ್ದಿ ಜಾಲ ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ:  ಡಾ.ಕೆ.ವಿ.ರಾಜೇಂದ್ರ

ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ:  ಡಾ.ಕೆ.ವಿ.ರಾಜೇಂದ್ರ

0

ಮೈಸೂರು:  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆಯ ಕಡೆ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವರಾದ ಆರ್ ಅಶೋಕ್ ಅವರು ನವೆಂಬರ್ 19 ರಂದು ಹೆಚ್ ಡಿ ಕೋಟೆ ತಾಲೂಕಿನ ಕೆಂಚನಹಳ್ಳಿ ಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಸಚಿವರ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ  ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್‌’ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ನವೆಂಬರ್ 19 ರಂದು ಹಮ್ಮಿಕೊಳ್ಳಲಾಗಿದ್ದು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಇನ್ನೂ ಮುಂತಾದ ಇಲಾಖೆಗಳ ಕುಂದು ಕೊರತೆಗಳನ್ನು ನಿವಾರಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ಗ್ರಾಮ ವಾಸ್ತವ್ಯ ಮಾಡಿದ ಗ್ರಾಮಗಳಲ್ಲಿ ಸಮಸ್ಯೆಗಳು ಕಡಿಮೆ ಆಗಿದ್ದು, ಈ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಿಸಬೇಕು ತಮ್ಮ ಇಲಾಖೆಗಳ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಆ ಗ್ರಾಮದಲ್ಲಿ ವಿತರಿಸುವಂತಾಗಬೇಕು.
ಹಕ್ಕು ಪತ್ರ, ಸಬ್ಸಿಡಿ ಯೋಜನೆ, ಕೃಷಿ ಉಪಕರಣ, ಪಡಿತರ ಚೀಟಿ ವಿತರಣೆ ಮುಂತಾದ ಸೌಲಭ್ಯಗಳನ್ನು ವಿತರಣೆ ಮಾಡಬೇಕು. ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವರು ವಿವಿಧ ಇಲಾಖೆಯ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಣೆ ಮಾಡಲಿದ್ದು ಪ್ರಮುಖ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡುವ ಸ್ಟಾಲ್ ಗಳನ್ನು ಅಳವಡಿಸಲು ಹಾಗೂ ಸಂಬAಧಪಟ್ಟ ಗ್ರಾಮಗಳ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸದಸ್ಯರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಹಾಗೂ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳಾದ ಡಾ. ಮಂಜುನಾಥ ಸ್ವಾಮಿ ಅವರು ಬೆಳಿಗ್ಗೆ 10:00 ಗಂಟೆಗೆ ಕಂದಾಯ ಸಚಿವರು ಭೀಮನ ಕೊಲ್ಲಿಗೆ ಆಗಮಿಸುತ್ತಾರೆ. ವಿವಿಧ ಇಲಾಖೆಗಳು ತಮ್ಮ ಇಲಾಖೆಯ ಯೋಜನೆಗಳ ಮಾಹಿತಿ ನೀಡುವ ಸ್ಟಾಲ್ ಗಳನ್ನು ನಿರ್ಮಿಸಬೇಕು. ನಂತರ ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ವೇದಿಕೆ ಕಾರ್ಯಕ್ರಮ ನಡೆಯುತ್ತದೆ.
ಅರ್ಜಿ ಸ್ವೀಕಾರ ಮತ್ತು ವಿಲೇವಾರಿ ನಡೆಯುತ್ತದೆ. ಸಂಜೆ 4 ಗಂಟೆಯಿAದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನಂತರ ಸಂಜೆ ಐದು ಗಂಟೆಗೆ ಸಚಿವರು ಕೆಂಚನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಂದು ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಾರೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌’ನ ಸಿಇಓ ಡಾ.ಬಿ.ಆರ್. ಪೂರ್ಣಿಮಾ, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಎಂ.ಪಿ.ಎಸ್.ಮೂರ್ತಿ, ಮುಖ್ಯ ಕಾರ್ಯದರ್ಶಿಗಳಾದ ಮಂಜುನಾಥ್, ಕಾರ್ಯದರ್ಶಿಗಳಾದ ಎಂ.ಎನ್.ಜಗದೀಶ್ ಹಾಗೂ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಒಟಿಟಿಗೆ ಲಗ್ಗೆ ಇಡುತ್ತಿರುವ ಮಾನ್ಸೂನ್ ರಾಗ , ಗುರು ಶಿಷ್ಯರು ಚಿತ್ರಗಳು
ಮುಂದಿನ ಲೇಖನಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್