ಮನೆ ರಾಜ್ಯ ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್

ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ದೊಡ್ಡ ಹಗರಣ: ಡಾ.ಶರಣಪ್ರಕಾಶ್ ಪಾಟೀಲ್

0

ರಾಯಚೂರು: ನೀಟ್ ಪರೀಕ್ಷೆ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಎಂದು ವೈದ್ಯಕೀಯ ವಿಜ್ಞಾನ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ದೂರಿದರು.

Join Our Whatsapp Group

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಈ ಅಕ್ರಮದಲ್ಲಿ ಬಹಳ ದೊಡ್ಡ ದೊಡ್ಡ ಜನ ಶಾಮೀಲಾಗಿದ್ದಾರೆ. ಈ ರೀತಿಯ ಶಂಕೆ ಇಡೀ ದೇಶದ ಜನರಿಗೆ ಬರುತ್ತಿದೆ. ಕೇಂದ್ರ ಸರ್ಕಾರದ ನಿಲುವು ಬಹಳ ಅನುಮಾನಾಸ್ಪದವಾಗಿದೆ. ಬಹಳ ದೊಡ್ಡ ಮಟ್ಟದ ಹಗರಣ ನಡೆದರೂ ಕೇಂದ್ರ ತನಿಖೆ ಮಾಡುತ್ತಿಲ್ಲ. ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂಬುದು ಎಲ್ಲ ರಾಜ್ಯಗಳ ಆಗ್ರಹವಾಗಿದೆ. ಕೇಂದ್ರ ಸರ್ಕಾರ ತನಿಖೆಗೆ ಮುಂದಾಗುತ್ತಿಲ್ಲ. ಕೇಂದ್ರ ಸರ್ಕಾರ ಯಾರನ್ನು ರಕ್ಷಣೆ ಮಾಡುತ್ತಿದೆ ಗೊತ್ತಿಲ್ಲ ಎಂದರು.

ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದರು.

ನೀಟ್ ತಿರಸ್ಕಾರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ನೀಟ್ ನಡೆಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂ ಕೋರ್ಟ್ ತೀರ್ಪು ಆಗಬೇಕು. ತಮಿಳುನಾಡು ಸರ್ಕಾರ ಅವರ ಭಾವನೆ ಹೇಳಿದ್ದಾರೆ. ನಾವು ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂ ಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ ಎಂದರು.