ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣವನ್ನ ಸಿಐಡಿ ತನಿಖೆಗೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತ ನೇಹಾ ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹಾಗೆಯೇ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ನಡುವೆ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ.















