ಮನೆ ರಾಜಕೀಯ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ನನಗಾಗಲಿ, ಸಿದ್ದರಾಮಯ್ಯ ಅವರಿಗಾಗಲಿ ಇಲ್ಲ: ಡಿ.ಕೆ.ಶಿವಕುಮಾರ್

ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ನನಗಾಗಲಿ, ಸಿದ್ದರಾಮಯ್ಯ ಅವರಿಗಾಗಲಿ ಇಲ್ಲ: ಡಿ.ಕೆ.ಶಿವಕುಮಾರ್

0

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ನನಗಾಗಲಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಲಿ ಇಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕು ಇರುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಭಾನುವಾರ ಕೊಪ್ಪಳದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ನಡೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ. ನನಗೂ ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕು ಇರುವುದು. ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಬಾರಿ ಸೋಲು ಕಂಡವರಿಗೆ ಪ್ರೋತ್ಸಾಹ ಮಾಡಿ ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಖರ್ಗೆ ಅವರೇ ನಮಗೆ ಹೈಕಮಾಂಡ್. ಅವರಿಗೆ ಘೋಷಣೆ ಮಾಡುವ ಹಕ್ಕಿದೆ ಎಂದರು.

ಕೊಪ್ಪಳದ ವನಬಳ್ಳಾರಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಕೊಪ್ಪಳ ಜಿಲ್ಲೆಯಲ್ಲಿ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ಶಿವರಾಜ ತಂಗಡಗಿ, ಅಮರೇಗೌಡ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ್ ಅವರನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಕರೆ ನೀಡಿದ್ದರು.

ಹಿಂದಿನ ಲೇಖನಹಿರಿಯ ನ್ಯಾಯವಾದಿಗಳು ಕಿರಿಯ ವಕೀಲರನ್ನುಆಳುಗಳಂತೆ ನಡೆಸಿಕೊಳ್ಳಬಾರದು: ಸಿಜೆಐ ಡಿ ವೈ ಚಂದ್ರಚೂಡ್
ಮುಂದಿನ ಲೇಖನಒಂದೇ ಕುಟುಂಬದ 6 ಮಂದಿ ನಿಗೂಢ ಸಾವು