ಮನೆ ರಾಜ್ಯ ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

0

ಮೈಸೂರು: ಸಿಎಸ್ ​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು, ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಆರೋಪಗಳಿಗೆ ಯತೀಂದ್ರ ಅವರು ತಿರುಗೇಟು ನೀಡಿದ್ದಾರೆ.

ವೈರಲ್ ವಿಡಿಯೋದಲ್ಲಿ, “ಹಲೋ ಅಪ್ಪಾ… ವಿವೇಕಾನಂದನ? ಯಾರು? ಅಂತ ಯತೀಂದ್ರ ಅವರು ಸಿದ್ದರಾಮಯ್ಯ ಅವರ ಬಳಿ ಕೇಳುವುದನ್ನು ಕಾಣಬಹುದು. ಈ ವಿಚಾರವಾಗಿ ಇಂದು ಟ್ವೀಟ್ ಮಾಡಿದ ಕುಮಾರಸ್ವಾಮಿ, ವಿವೇಕಾನಂದರ ವರ್ಗಾವಣೆ ಕುರಿತ ಪ್ರತಿಯನ್ನು ಹಂಚಿಕೊಂಡು “ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಯತೀಂದ್ರ, ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ. ಇನ್ಸ್​ ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ ಎಂದು ಹೇಳಿದರು.

ಇವರು (ಕುಮಾರಸ್ವಾಮಿ) ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ದರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದು ಕುಮಾರಸ್ವಾಮಿ ವಿರುದ್ಧ ಯತೀಂದ್ರ ವಾಗ್ದಾಳಿ ನಡೆಸಿದರು.