ಮನೆ ರಾಷ್ಟ್ರೀಯ ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ನಿರ್ಮಲಾ ಸೀತಾರಾಮನ್

ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ನಿರ್ಮಲಾ ಸೀತಾರಾಮನ್

0

ನವದೆಹಲಿ: ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

Join Our Whatsapp Group

ದಾಖಲೆಯ ಸತತ 8ನೇ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್, ಈ ಕುರಿತು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮಧ್ಯಂತರ ಬಜೆಟ್ ಮಂಡನೆ ವೇಳೆ ಆದಾಯ ತೆರಿಗೆ ಕಾಯ್ದೆ 1961 ಅನ್ನು ಸಮಗ್ರ ಪರಿಶೀಲನೆಗೆ ಒಳಪಡಿಸುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಹೊಸ ಆದಾಯ ತೆರಿಗೆ ಮಸೂದೆಯನ್ನು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಪ್ರಸ್ತುತ ಇರುವ ಆದಾಯ ತೆರಿಗೆ ಕಾಯ್ದೆ ಬದಲಿಗೆ ಗ್ರಹಿಕೆಗೆ ಅನುಕೂಲಕರವಾಗುವಂತೆ ಸರಳೀಕರಣ ಮತ್ತು ಪುಟಗಳ ಸಂಖ್ಯೆ ಕಡಿಮೆ ಮಾಡಿ ಹೊಸ ಕಾಯ್ದೆ ಮಂಡನೆಯಾಗುವ ಸಾಧ್ಯತೆಯಿದೆ.