ಮನೆ ರಾಜ್ಯ ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಹೊಸ ಯೋಜನೆ: ದಿನೇಶ್ ಗುಂಡೂರಾವ್

ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಹೊಸ ಯೋಜನೆ: ದಿನೇಶ್ ಗುಂಡೂರಾವ್

0

ಬೆಳಗಾವಿ: ಕರ್ನಾಟಕದಲ್ಲಿ ಸಿಸೇರಿಯನ್ ಹೆರಿಗೆಗಳ ಸಂಖ್ಯೆ ಹೆಚ್ಚಾಗಲು ಖಾಸಗಿ ಆಸ್ಪತ್ರೆಗಳೇ ಕಾರಣ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Join Our Whatsapp Group

ಅನವಶ್ಯಕವಾಗಿ ಸಿಸೇರಿಯನ್ ಹೆರಿಗೆ ಮಾಡುವುದನ್ನು ತಡೆಯಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಘೋಷಿಸಲಿದೆ ಎಂದು ವಿಧಾನ ಪರಿಷತ್ತಿಗೆ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳು ಹೆಚ್ಚಾಗಿದ್ದು, ಒಟ್ಟಾರೆ ಹೆರಿಗೆಗಳ ಪೈಕಿ ಅವುಗಳ ಪಾಲು ಶೇ 46 ರಷ್ಟಿದೆ. ಒಟ್ಟು ಸಿಸೇರಿಯನ್ ಹೆರಿಗೆಗಳಲ್ಲಿ ಶೇಕಡಾ 61 ರಷ್ಟು ಖಾಸಗಿ ಆಸ್ಪತ್ರೆಗಳನ್ನು ನಡೆಯುತ್ತವೆ. ಶೇ. 36 ರಷ್ಟು ಸರ್ಕಾರಿ ಆಸ್ಪತ್ರೆಗಳಿಂದ ವರದಿಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಎಂಎಲ್ಸಿ ಜಗದೇವ್ ಗುತ್ತೇದಾರ್ ಪ್ರಶ್ನೆಗೆ ಉತ್ತರಿಸುವಾಗ ಸಚಿವರು ಈ ವಿವರ ನೀಡಿದ್ದಾರೆ.

ಅನಗತ್ಯ ಸಿಸೇರಿಯನ್ ಹೆರಿಗೆಗಳನ್ನು ತಡೆಯುವ ಅಗತ್ಯವನ್ನು ಒತ್ತಿ ಹೇಳಿದ ಅವರು, ಅದರ ತಡೆಗಾಗಿ ಇಲಾಖೆಯು ಪ್ರತ್ಯೇಕ ಕಾರ್ಯಕ್ರಮವನ್ನು ಜನವರಿಯಲ್ಲಿ ಪ್ರಾರಂಭಿಸಲಿದೆ ಎಂದು ಸದನಕ್ಕೆ ತಿಳಿಸಿದರು.

ಕೆಲವು ಖಾಸಗಿ ಆಸ್ಪತ್ರೆಗಳು ಕೇವಲ ಹಣದ ಉದ್ದೇಶದಿಂದ ಶೇಕಡಾ 80 ರಿಂದ 90 ರಷ್ಟು ಪ್ರಕರಣಗಳಲ್ಲಿ ಸಿಸೇರಿಯನ್ ಹೆರಿಗೆಗಳನ್ನು ಮಾಡಿಸುತ್ತವೆ. ಸಾಮಾನ್ಯ ಹೆರಿಗೆಗೆ ಹೋಲಿಸಿದರೆ ಇದು ಸುಲಭವಾಗಿರುವುದೂ ಆ ಆಸ್ಪತ್ರೆಗಳ ನಡೆಗೆ ಕಾರಣ ಇರಬಹುದು ಎಂದು ಸಚಿವರು ಗಮನಸೆಳೆದರು.

ಗರ್ಭಿಣಿಯರನ್ನು ಸಾಮಾನ್ಯ ಹೆರಿಗೆಗೆ ಮಾನಸಿಕವಾಗಿ ಸಿದ್ಧಪಡಿಸುವ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ. ಜತೆಗೆ, ವೈದ್ಯರ ನಿರ್ಧಾರದ ಹಿಂದಿನ ಅಗತ್ಯ ಮತ್ತು ಕಾರಣವನ್ನು ತಿಳಿಯಲು ನಾವು ಈಗಾಗಲೇ ಪ್ರತಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಗಳ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ ಎಂದೂ ತಿಳಿಸಿದ್ದಾರೆ.

ಸಿಸೇರಿಯನ್ ಹೆರಿಗೆಯನ್ನು ತಪ್ಪಿಸಲು ತಾಲೂಕು ಆಸ್ಪತ್ರೆಗಳಲ್ಲಿ 24/7 ಹೆರಿಗೆ ಸೇವೆ ಒದಗಿಸುವ ಸರ್ಕಾರದ ಯೋಜನೆಯ ಬಗ್ಗೆಯೂ ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, 2023-24 ಮತ್ತು 2024-25 ರಲ್ಲಿ 45 ಜನರನ್ನು ಎಂದು ತಿಳಿಸಿದ್ದಾರೆ. ಬೆಳಗಾವಿ ಕೋಲಾರ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಪ್ರಕರಣಗಳು ದಾಖಲಾಗಿವೆ ಎಂದೂ ಮಾಹಿತಿ ನೀಡಿದ್ದಾರೆ.