ಮನೆ ದೇಶ ಇಂದು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ಇಂದು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

0

ನವದೆಹಲಿ (New Delhi): ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಬೆಳಿಗ್ಗೆ 10.15ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಮಾಣ ವಚನಕ್ಕೂ ಮುನ್ನ 21 ಸುತ್ತು ಗುಂಡು ಹಾರಾಟ ನಡೆಸಿ ಗೌರವ ವಂದನೆಸಲ್ಲಿಸಲಾಗುವುದು.

ಇದಕ್ಕೂ ಮುನ್ನ ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಮತ್ತು ನೂತನ ರಾಷ್ಟ್ರಪತಿ ಮುರ್ಮು ಅವರು ವಿಧಿಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಬರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಹಾಗೂ ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹಿಂದಿನ ಲೇಖನವಿಂಡೀಸ್ ವಿರುದ್ಧ ಸತತ 12ನೇ ಸರಣಿ ಜಯ: ವಿಶ್ವದಾಖಲೆ ಬರೆದು ಅಗ್ರಸ್ಥಾನಕ್ಕೇರಿದ ಭಾರತ
ಮುಂದಿನ ಲೇಖನಇಂದಿನ ಚಿನ್ನ-ಬೆಳ್ಳಿ ದರದ ವಿವರ