ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.
ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈಗ ಕರ್ನಾಟಕದಲ್ಲಿ ಹೊಸ ಪ್ರಗತಿಪರ ಭವಿಷ್ಯದ ಅಲೆ ಶುರುವಾಗಿದ್ದು, ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಉತ್ಸಾಹದಿಂದ ಸ್ವಾಗತಿಸುತ್ತೇವೆ, ಈ ಮೂಲಕ ಕಾಂಗ್ರೆಸ್ ಪಕ್ಷ ಜನರಿಗೆ ಅಭಿವೃದ್ಧಿ ಮತ್ತು ಪಾರದರ್ಶಕತೆಯನ್ನು ಮರಳಿ ನೀಡಲು ಸಜ್ಜಾಗಿದೆ ಎಂದು ಬರೆದುಕೊಂಡಿದ್ದಾರೆ.
ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ.ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.