ಮನೆ ರಾಜಕೀಯ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ:ವಿಪಕ್ಷ ನಾಯಕ ಸಿದ್ದರಾಮಯ್ಯ

ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ:ವಿಪಕ್ಷ ನಾಯಕ ಸಿದ್ದರಾಮಯ್ಯ

0

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಚಾಮುಂಡೇಶ್ವರಿ ಕ್ಷೇತ್ರ ಸೇರಿದಂತೆ 8 ರಿಂದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡವಿದೆ. ಆದರೆ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ  ಮಾಡಬಾರದು ಅಂದುಕೊಂಡಿದ್ದೇನೆ.  ಚುನಾವಣೆಗೆ ಇನ್ನು 1 ವರ್ಷ 2 ತಿಂಗಳಿದೆ.  ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ತೀರ್ಮಾನಿಸಿಲ್ಲ.  ಹೈಕಮಾಂಡ್ ಸೂಚಿಸಿದ ಕಡೆ ನಿಲ್ಲುತ್ತೇನೆ ಎಂದರು.

ಕಾಂಗ್ರೆಸ್ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತ: ಬಿಜೆಪಿ ಜೆಡಿಎಸ್  ಶಾಸಕರು ಬಂದು ಚರ್ಚಿಸಿರುವುದು ನಿಜ. ಬಿಜೆಪಿ  ಶಾಸಕರು ಸಂಪರ್ಕದಲ್ಲಿದ್ದಾರೆಂದು ಹೇಳಿದ್ದೇನೆ. ಆದರೆ ಕಾಂಗ್ರೆಸ್ ಪಕ್ಷ ಬಿಟ್ಟು ಹೋದವರನ್ನ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿಲ್ಲ. ನಾನಾಗಿಯೇ ಯಾವ ಶಾಸಕರ ಬಳಿಯೂ ಮಾತನಾಡಲ್ಲ. ಬಿಜೆಪಿ ಶಾಸಕರು ಅವರಾಗಿಯೇ ಬಂದರೇ ಮಾತನಾಡುತ್ತೇನೆ.   ಕಾಂಗ್ರೆಸ್ ಸಿದ್ದಾಂತ ಒಪ್ಪಿ ಬಂದ ಶಾಸಕರಿಗೆ ಸ್ವಾಗತ ಎಂದು ಸಿದ್ಧರಾಮಯ್ಯ ತಿಳಿಸಿದರು.

ಹಿಂದಿನ ಲೇಖನಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಎನ್ ಸಿಸಿ ನೇತೃತ್ವ ವಹಿಸಿದ ಮೈಸೂರು ವಿದ್ಯಾರ್ಥಿನಿ 
ಮುಂದಿನ ಲೇಖನಬೆಂಗಳೂರಿನಲ್ಲಿ ಶೇ.90ರಷ್ಟು ಮಂದಿಗೆ ಒಮೈಕ್ರಾನ್ ರೂಪಾಂತರಿ ಸೋಂಕು