ನವದೆಹಲಿ(Newdelhi): ಮಂಗಳವಾರ ಬೆಳಗ್ಗೆ ಪಿಎಫ್ಐ ಕಾರ್ಯಕರ್ತರಿಗೆ ಎನ್ಐಎ ಮತ್ತೆ ಶಾಕ್ ನೀಡಿದ್ದು, ದೇಶದಾದ್ಯಂತ 8 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಕಚೇರಿಗಳು ಮತ್ತು ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಗುಜರಾತ್, ದೆಹಲಿ, ಅಸ್ಸಾಂ ಸೇರಿ 8 ರಾಜ್ಯಗಳಲ್ಲಿ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.
ಕರ್ನಾಟಕದ ಉಡುಪಿ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಾಮರಾಜನಗರ ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯಲ್ಲಿ 7 ಜನ, ವಿಜಯಪುರದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ, ಬೆಳಗಾವಿಯಲ್ಲಿ 5 ಜನ, ಚಿತ್ರದುರ್ಗದಲ್ಲಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಗ್ರವಾದ, ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ, ಶಸ್ತ್ರಾಸ್ತ್ರ ತರಬೇತಿ ನೀಡಲು ಶಿಬಿರಗಳ ಆಯೋಜನೆ, ಉಗ್ರವಾದ ಚಟುವಟಿಕೆಗಳಿಗೆ ಪ್ರೆರೇಪಣೆ, ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವುದು ಸೇರಿದಂತೆ ಹಲವಾರ ಆರೋಪಗಳನ್ನು ಪಿಎಫ್‌ಐ ಮೇಲೆ ಮಾಡಲಾಗಿದೆ.