ಮನೆ ರಾಜ್ಯ ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕಿಡಿ

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ; ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕಿಡಿ

0

ಬೆಂಗಳೂರು : ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ‌ನಿಖಿಲ್ ಕುಮಾರಸ್ವಾಮಿ ‌ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಈ ಸಂಬಂಧ ಪ್ರತಿಕ್ರಿಯೆ ‌ನೀಡಿರೋ ನಿಖಿಲ್ ಕುಮಾರಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ದೇಶಾದ್ಯಂತ ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಭಾಷಣ ಮಾಡುವ ರಾಹುಲ್ ಗಾಂಧಿ ಅವರೇ, ಒಮ್ಮೆ ನಿಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದತ್ತ ನೋಡಿ.

ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದು ಯಾವ ‘ಸಂವಿಧಾನ’ದ ನಿಯಮ ರಾಹುಲ್ ಗಾಂಧಿ ಅವರೇ? ಮೊದಲು ಕರ್ನಾಟಕ ಸರ್ಕಾರಕ್ಕೆ ಸಂವಿಧಾನದ ಪಾಠ ಮಾಡಿ. ಮಾಧ್ಯಮಗಳನ್ನು ಪಂಜರದಲ್ಲಿ ಇಡಲು ಹೊರಟಿರುವ ಈ ಕರಾಳ ಸುತ್ತೋಲೆ ಅಪ್ಪಟ ‘ತುರ್ತು ಪರಿಸ್ಥಿತಿ’ಯ ಮುಂದುವರಿದ ಭಾಗ ಅಂತ ಕಿಡಿಕಾರಿದ್ದಾರೆ.