ಮನೆ ಸುದ್ದಿ ಜಾಲ ಪರಿಸರ ಸಂರಕ್ಷಕರನ್ನು ಸನ್ಮಾನಿಸಿದ ನಿಖಿಲ್‌ ಕುಮಾರಸ್ವಾಮಿ

ಪರಿಸರ ಸಂರಕ್ಷಕರನ್ನು ಸನ್ಮಾನಿಸಿದ ನಿಖಿಲ್‌ ಕುಮಾರಸ್ವಾಮಿ

0

ಹಾಲಹಳ್ಳಿ ಚೆನ್ನಯ್ಯ ಪಾರ್ಕಿನಲ್ಲಿ ಎಚ್‌.ಡಿ.ದೇವೇಗೌಡರ ಹುಟ್ಟು ಹಬ್ಬ ಆಚರಣೆ

ಮಂಡ್ಯ ನಗರದ ಹಾಲಹಳ್ಳಿ ಚೆನ್ನಯ್ಯ ಪಾರ್ಕಿನಲ್ಲಿ ಜೆಡಿಎಸ್‌ ಜಿಲ್ಲಾ ಘಟಕ, ಪಾರ್ಕ್‌ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಪರಿಸರ ಸಂರಕ್ಷಕರಿಗೆ ಸನ್ಮಾನ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಮಾತನಾಡಿ, ಎಚ್‌.ಡಿ.ದೇವೇಗೌಡ ಅವರಿಗೆ ಮಂಡ್ಯ ಜಿಲ್ಲೆಯೆಂದರೆ ವಿಶೇಷ ಪ್ರೀತಿ ಇದೆ ಎಂದರು.

ನಮ್ಮ ತಾತ ಎಚ್‌ಡಿಡಿ ಅವರು ಮಂಡ್ಯ ಮತ್ತು ಹಾಸನ ಜಿಲ್ಲೆಗಳು ನನ್ನ ಎರಡು ಕಣ್ಣುಗಳು ಎಂದಿದ್ದಾರೆ, ಆದರೆ ಅವರೇ ಇಂದು ಕಾರ್ಯಕ್ರಮಕ್ಕೆ ಬರಬೇಕಿತ್ತು, ವಯೋಸಹಜ ಹಿನ್ನಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಏನೇ ಆಗಲಿ ನಿಮ್ಮ ಪ್ರೀತಿ ವಿಶ್ವಾಸವನ್ನು ಅವರು ಮರೆಯೊಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಕರಾದ ಕುಳ್ಳೇಗೌಡ, ದರ್ಶನ್‌, ಮಂಗಲ ಯೋಗೇಶ್‌, ರಾಜಣ್ಣ ಅವರನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್‌, ನಗರಸಭೆ ಸದಸ್ಯ ರಾಮಲಿಂಗಯ್ಯ,  ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್‌, ಮನ್‌ಮುಲ್‌ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ, ಚೆನ್ನಯ್ಯ ಪಾರ್ಕ್‌ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಬಿ.ಅರವಿಂದ್‌ಕುಮಾರ್, ಮುಖಂಡರಾದ ಸಂತೋಷ್‌ ಕಾಳೇನಹಳ್ಳಿ, ಹಾಲಹಳ್ಳಿ ಮಹೇಶ್‌  ಸೇರಿದಂತೆ ನಿವಾಸಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.