ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1 ಪ್ರಾಜೆಕ್ಟ್ ಆಫೀಸರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 4, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸೈಕಾಲಜಿ/ಸಾಮಾಜಿಕ ಕೆಲಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ
ಬೆಂಗಳೂರು
ವೇತನ
ಮಾಸಿಕ 35,000 ರೂ.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 21/01/2023
ಇ-ಮೇಲ್ ಕಳುಹಿಸಲು ಕೊನೆ ದಿನ: ಫೆಬ್ರವರಿ 4, 2023
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಇ-ಮೇಲ್ ಐಡಿ capnimhans@nimhans.ac.in ಗೆ ಕಳುಹಿಸಬೇಕು.