ಮನೆ ರಾಷ್ಟ್ರೀಯ ಸತತ 8ನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲ ಸೀತಾರಾಮನ್

ಸತತ 8ನೇ ಬಾರಿ ಬಜೆಟ್ ಮಂಡಿಸಲಿರುವ ನಿರ್ಮಲ ಸೀತಾರಾಮನ್

0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಫೆಬ್ರವರಿ 1ರಂದು ಸತತ ಎಂಟನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಆ ಮೂಲಕ ದಾಖಲೆ ಬರೆಯಲಿದ್ದಾರೆ.

Join Our Whatsapp Group

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು.

ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಮತ್ತು 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದರು.

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು.

ಮಧ್ಯಮ ವರ್ಗದ ಮೇಲೆ ಹೊರೆಯನ್ನು ತಗ್ಗಿಸಲು ಮತ್ತು ಆರ್ಥಿಕತೆಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವ ನಿರೀಕ್ಷೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.