ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮಂಗಳೂರಿನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಇದೇ ಡಿಸೆಂಬರ್ 22 ರಂದು ಬೆಳಗ್ಗೆ 9 ಗಂಟೆಗೆ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬೇಕು.
ವಿದ್ಯಾರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಎಂಎ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು.
ವೇತನ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 31,000 ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/12/2022
ಸಂದರ್ಶನ ನಡೆಯುವ ದಿನಾಂಕ: 22/12/2022 ಬೆಳಗ್ಗೆ 9 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್
ಕರ್ನಾಟಕ