ಮನೆ ಉದ್ಯೋಗ ನೀತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನೀತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ನೀತಿ ಆಯೋಗ ಅಂದರೆ ನ್ಯಾಷನಲ್ ಇನ್ಸ್ಟಿಟ್ಯೂಷನ್ ಫಾರ್ ಟ್ರಾನ್ಸ್ಫಾರ್ಮಿಂಗ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಸೀನಿಯರ್ ಸ್ಪೆಷಲಿಸ್ಟ್/ ಸ್ಪೆಷಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Join Our Whatsapp Group

ನೀತಿ ಆಯೋಗದ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು 3 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಬಳಿಕ 5 ವರ್ಷಗಳವರೆಗೆ ವಿಸ್ತರಿಸಬಹುದು. ಒಟ್ಟು 10 ಹುದ್ದೆಗಳು ಖಾಲಿ ಇದ್ದು, ನೀತಿ ಆಯೋಗದ ನೇಮಕಾತಿ ಪ್ರಕ್ರಿಯೆ ಅಡಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್ಸೈಟ್ niti.gov.inಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ಆಫ್ ಲೈನ್/ ಪೋಸ್ಟ್ ಮೂಲಕವೂ ಅರ್ಜಿ ಹಾಕಬಹುದು. ಅಭ್ಯರ್ಥಿಗಳು ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ಸಂಬಂಧಿತ ದಾಖಲೆಗಳೊಂದಿಗೆ ಕೊನೆಯ ದಿನಾಂಕದ ಮೊದಲು ಅಧಿಸೂಚನೆಯಲ್ಲಿ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.

ಅರ್ಹತೆಗಳೇನು?

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ/ ಎಂಬಿಬಿಎಸ್/ ಎಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಅನುಭವ:

ಸೀನಿಯರ್ ಸ್ಪೆಷಲಿಸ್ಟ್- ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ಸ್ಪೆಷಲಿಸ್ಟ್- ಅಭ್ಯರ್ಥಿಗಳು 8 ವರ್ಷಗಳ ಕಾಲ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

ಸೀನಿಯರ್ ಸ್ಪೆಷಲಿಸ್ಟ್- ಅಭ್ಯರ್ಥಿಗಳ ವಯಸ್ಸು ಕನಿಷ್ಠ 33 ವರ್ಷ ಹಾಗೂ ಗರಿಷ್ಠ 50 ವರ್ಷದೊಳಗಿರಬೇಕು.

ಸ್ಪೆಷಲಿಸ್ಟ್- ಅಭ್ಯರ್ಥಿಗಳ ವಯಸ್ಸು ಕನಿಷ್ಠ 30 ವರ್ಷ ಹಾಗೂ ಗರಿಷ್ಠ 50 ವರ್ಷದೊಳಗಿರಬೇಕು.

ಸರ್ಕಾರಿ ಅಧಿಕಾರಿಗಳಿಗೆ ಗರಿಷ್ಠ ವಯೋಮಿತಿ 56 ವರ್ಷಗಳು.

Niti Aayog Recruitment 2023 Apply Link

ವೇತನ:

ಸೀನಿಯರ್ ಸ್ಪೆಷಲಿಸ್ಟ್- ಮಾಸಿಕ ₹ 2,20,000

ಸ್ಪೆಷಲಿಸ್ಟ್- ಮಾಸಿಕ ₹ 1,45,000