ಮನೆ ಉದ್ಯೋಗ ನೀತಿ ಆಯೋಗದಲ್ಲಿ ಯುವ ವೃತ್ತಿಪರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನೀತಿ ಆಯೋಗದಲ್ಲಿ ಯುವ ವೃತ್ತಿಪರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

0

ನೀತಿ ಆಯೋಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲಾಗಿದೆ. ಯುವ ವೃತ್ತಿಪರ ಮತ್ತು ಕನ್ಸಲ್ಟೆಂಟ್​ ಗ್ರೇಡ್​ 1 ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 28 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ.

ಈ ಹುದ್ದೆಗಳನ್ನು ಎರಡು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾನ್ಸ್‌ಫಾರ್ಮಿಂಗ್ ಇಂಡಿಯಾ ಆಯೋಗ (NITI Aayog)
ಹುದ್ದೆಯ ಹೆಸರು: ಸಲಹೆಗಾರ, ಯುವ ವೃತ್ತಿಪರ
ಹುದ್ದೆಗಳ ಸಂಖ್ಯೆ: 28
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 70,000- 1.45000 ರೂ ಮಾಸಿಕ

ಅನುಭವ
ಕನ್ಸ್​ಲ್ಟೆಂಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾರ್ಯಕ್ರಮ ನಿರ್ವಹಣೆ, ಸಂಶೋಧನೆ ಸೇರಿದಂತೆ ಸಂಬಂಧಿಸಿದ ಕ್ಷೇತ್ರದಲ್ಲಿ 3 ರಿಂದ 8 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
ಯುವ ವೃತ್ತಿಪರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಒಂದು ವರ್ಷ ಹುದ್ದೆ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​

ಅರ್ಜಿ ಶುಲ್ಕ: ವಿನಾಯಿತಿ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್​​ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಸೆಪ್ಟೆಂಬರ್​ 2022
ಆನ್​ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಅಕ್ಟೋಬರ್​​​ 2022

ಅಧಿಕೃತ ವೆಬ್‌ಸೈಟ್: niti.gov.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ.

ಹಿಂದಿನ ಲೇಖನದೀಪಾವಳಿಗೂ ಮೊದಲೇ ಈ 5 ರಾಶಿಯವರಿಗೆ ಶುರುವಾಗಲಿದೆ ಶುಕ್ರದೆಸೆ..!
ಮುಂದಿನ ಲೇಖನಬಳ್ಳಾರಿ ಮಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಬಾಲಕ ಸಾವು