ಪಟ್ನಾ: ಜೆಡಿ(ಯು) ನಾಯಕ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ಪಾಟ್ನಾದ ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ನಿಯೋಜಿತ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಮತ್ತು ಅವರ ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ ಮತ್ತು ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.