ಮನೆ ಉದ್ಯೋಗ ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

0

ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ 1 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್ಲೈನ್’ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:

ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA/ICMA ಪೂರ್ಣಗೊಳಿಸಿರಬೇಕು.

ವಯೋಮಿತಿ:

ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಫೈನಾನ್ಸಿಯಲ್ ಅಡ್ವೈಸರ್ & ಚೀಫ್ ಅಕೌಂಟ್ಸ್ ಆಫೀಸರ್

ನವ ಮಂಗಳೂರು ಬಂದರು ಪ್ರಾಧಿಕಾರ

ಪಣಂಬೂರು

ಮಂಗಳೂರು-575010

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/12/2022

ಅರ್ಜಿ ಸಲ್ಲಿಸಲು ಕೊನೆ ದಿನ: 15/01/2023