ಮೈಸೂರು(Mysuru): ಮೈಸೂರು ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆಗೂ ಮೈತ್ರಿ ಬೇಡ ಎಂದು ವರಿಷ್ಠರು ಹೇಳಿರುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರದಲ್ಲಿ ನನಗೆ ಅಷ್ಟೇನೂ ಆಸಕ್ತಿಯಿಲ್ಲ. ಕಳೆದ ಬಾರಿಯ ಘಟನೆಯಿಂದ ಪಾಠ ಕಲಿತಿದ್ದೇನೆ. ಹಾಗಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ.ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಸಂಖ್ಯಾಬಲ 26 ಇದೆ, ಬಿಜೆಪಿ ಸಂಖ್ಯಾಬಲ 27 ಇದೆ. ಸ್ಥಳೀಯ ಸಂಸ್ಥೆಯಲ್ಲಿ ಯಾರ ಸಂಖ್ಯೆ ಹೆಚ್ಚಿದೆಯೋ ಅವರು ಮೇಯರ್ ಆಗುತ್ತಾರೆ. ಏನೇನು ಆಗುತ್ತದೆಯೋ ಕಾದು ನೋಡೋಣ ಎಂದು ಮಾರ್ಮಿಕವಾಗಿ ಹೇಳಿದರು.
Saval TV on YouTube