ಮನೆ ರಾಜ್ಯ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

0

ಹಾಸನ: ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಹಾಸನದಲ್ಲಿ ಇಂದು ಮಾತನಾಡಿದ ಸಚಿವ ಮುನಿಯಪ್ಪ, ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ. ಇನ್ನು 3 ತಿಂಗಳಲ್ಲಿ ಅರ್ಹರಿಗೆ  ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ನೀಡಲಾಗುತ್ತದೆ ಎಂದರು.

ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಯಾರು ಅರ್ಹರಿರುತ್ತಾರೋ ಅವರಿಗೆ ಯಾವ ತೊಂದರೆ ಆಗುವುದಿಲ್ಲ. ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ತಿಳಿಸಿದರು.