ಮನೆ ಸುದ್ದಿ ಜಾಲ ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ..?

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ..?

0

ನವದೆಹಲಿ : ಏಪ್ರಿಲ್‌ 1 ರಿಂದ ದೇಶಾದ್ಯಂತ ಟೋಲ್‌ ಪ್ಲಾಜಾಗಳಲ್ಲಿ ನಗದು ವಹಿವಾಟನ್ನು ಸ್ಥಗಿತಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದೆ.

ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಕ್ರಮ ವಹಿಸಲಾಗಿದೆ. ಹೊಸ ನಿಯಮ ಜಾರಿಯಾದಲ್ಲಿ ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರ ಟೋಲ್ ಪಾವತಿ ಮಾಡಬೇಕಾಗುತ್ತದೆ.

ಟೋಲ್‌ನಲ್ಲಿ ನಗದು ಪಾವತಿಗೆ ಅವಕಾಶ ಇದೆ. ಹೊಸ ನಿಯಮ ಜಾರಿಯಾದರೆ ಸಂಪೂರ್ಣ ಡಿಜಿಟಲ್ ಆಗಲಿದೆ. ಫಾಸ್ಟ್ ಟ್ಯಾಗ್ ಇಲ್ಲದಿದ್ದರೆ ಯುಪಿಐ ಮೂಲಕ 1.25% ಪಟ್ಟು ಹೆಚ್ಚು ಟೋಲ್ ಭರಿಸಬೇಕು. ದಟ್ಟಣೆ ಕಡಿಮೆ ಮಾಡಲು, ಪಾರದರ್ಶಕ ವ್ಯವಸ್ಥೆ ಜಾರಿಗೆ ಹೊಸ ಕ್ರಮ ಕೈಗೊಳ್ಳಲಾಗಿದೆ.

ಈ ಕ್ರಮವು ಶುಲ್ಕ ಪ್ಲಾಜಾಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಟೋಲ್ ವಹಿವಾಟುಗಳಲ್ಲಿ ಹೆಚ್ಚಿನ ಸ್ಥಿರತೆ ಮತ್ತು ಪಾರದರ್ಶಕತೆಯನ್ನು ತರುವ ಮೂಲಕ ಹೆದ್ದಾರಿ ಬಳಕೆದಾರರಿಗೆ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ ಎಂದು ಪ್ರಾಧಿಕಾರ ತಿಳಿಸಿದೆ.