ಬೆಂಗಳೂರು(Bengaluru): ಹಿಜಾಬ್ ನಿಷೇಧ ಕುರಿತು ಸುಪ್ರೀಂಕೋರ್ಟ್ ಸ್ಪಷ್ಟ ತೀರ್ಪು ನೀಡುವವರೆಗೂ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯಿಸಿದರು.
ಸುಪ್ರೀಂಕೋರ್ಟ್ ತೀರ್ಪು ಹೊರಬರದಿದ್ದರೂ, ರಾಜ್ಯ ಹೈಕೋರ್ಟ್ ನೀಡಿದ ತೀರ್ಪು ಇದೆ. ಕೋರ್ಟ್’ಗಳ ನಡೆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಶಾಲಾ ಶಿಕ್ಷಣ ನಿಯಮಗಳಂತೆ ಸರ್ಕಾರ ನಿಷೇಧದ ನಿರ್ಧಾರ ತೆಗೆದುಕೊಂಡಿತ್ತು. ಎಲ್ಲರಿಗೂ ಸಮವಸ್ತ್ರ ಕಡ್ಡಾಯವಿದ್ದಾಗ, ಧಾರ್ಮಿಕ ಸೂಚಕ ಬಟ್ಟೆಗಳನ್ನು ಧರಿಸಲು ಅವಕಾಶ ನೀಡುವುದು ಸರಿಯಲ್ಲ ಎನ್ನುವುದು ಸರ್ಕಾರದ ನಿಲುವು ಎಂದು ವಿವರಿಸಿದರು.
ತರಗತಿಗಳಲ್ಲಿ ಹಿಜಾಬ್ ನಿಷೇಧಿಸಿದ್ದ ಆದೇಶ ಪ್ರಶ್ನಿಸಿ ಉಡುಪಿಯ ಕೆಲ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸರ್ಕಾರದ ಆದೇಶ ಎತ್ತಿಹಿಡಿದಿತ್ತು. ನಂತರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ತೀರ್ಪು ಬರುವವರೆಗೂ ನಿಷೇಧದ ಆದೇಶ ಜಾರಿಯಲ್ಲಿರುತ್ತದೆ ಎಂದರು.