ಮನೆ ಸುದ್ದಿ ಜಾಲ ಮೆಟ್ರೋ ಸಂಚಾರದಲ್ಲಿ ನಾಳೆ ಯಾವುದೇ ಬದಲಾವಣೆ ಇಲ್ಲ : ಬಿಎಂಆರ್​​ಸಿಎಲ್ ಮಾಹಿತಿ ನೀಡಿದೆ

ಮೆಟ್ರೋ ಸಂಚಾರದಲ್ಲಿ ನಾಳೆ ಯಾವುದೇ ಬದಲಾವಣೆ ಇಲ್ಲ : ಬಿಎಂಆರ್​​ಸಿಎಲ್ ಮಾಹಿತಿ ನೀಡಿದೆ

0

ಬೆಂಗಳೂರು (ಮೇ 09): ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ  ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ ಎಂದು BMRCL ತಿಳಿಸಿದೆ ಎನ್ನಲಾಗಿದೆ.

ಈ ಕುರಿತು ಮೇ 10ರಂದು ನೇರಳೆ ಮಾರ್ಗದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕುರಿತು ಮೇ 8ರಂದು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯನ್ನು ಹಿಂತೆಗೆದುಕೊಳ್ಳಲಾಗಿದೆ.

ಆದರಿಂದ ಪ್ರಯಾಣಿಕರ ಹಿತದೃಷ್ಟಿಯಿಂದ ಭಾನುವಾರ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ಸೇವೆಗಳು ಬೆಳಿಗ್ಗೆ 05 ಗಂಟೆಯಿಂದಲೇ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ನಿರ್ವಹಣಾ ಕಾಮಗಾರಿಹ ಹಿನ್ನೆಲೆ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ರ ವರೆಗೆ ಸ್ಥಗಿತಗೊಳ್ಳಲಿದೆ ಎಂದು ಈ ಹಿಂದೆ ಬಿಎಂಆರ್​​ಸಿಎಲ್​​ ತಿಳಿಸಿತ್ತು ಎನ್ನಲಾಗಿದೆ.