ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕ್ಸ್) ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದರು.