ಮನೆ ರಾಜಕೀಯ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ನಷ್ಟವಿಲ್ಲ: ಸಿಎಂ ಬೊಮ್ಮಾಯಿ

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ನಷ್ಟವಿಲ್ಲ: ಸಿಎಂ ಬೊಮ್ಮಾಯಿ

0

ವಿಜಯನಗರ: ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Join Our Whatsapp Group

ಹೊಸಪೇಟೆಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು, ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ ಎಂದರು.

ಹಲವಾರು ಸರ್ವೇ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನು ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆನಂದ್​​ ಸಿಂಗ್ ಅವರಿಗೆ ವಯಸ್ಸು ಇತ್ತು. ಅವರ ಜತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿ.ಎಸ್ ​ಯಡಿಯೂರಪ್ಪ ಅವರು ಯುವಕರಿಗೆ ಅವಕಾಶ ಮಾಡಿಕೊಟ್ಟರು ಎಂದರು,.

ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಲಾಗಿತ್ತು. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇಂತಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರು ಅವರಿಂದ ಯಾವುದೇ ನಷ್ಟವಿಲ್ಲ. ಅವರಿಗೆ ಪಕ್ಷ ಕೊಟ್ಟ ಸ್ಥಾನಮಾನಗಳನ್ನು ನೋಡಿದರೆ ಅವರು ಹೈಕಮಾಂಡ್ ಜೊತೆ ಮಾತನಾಡಿ, ಸ್ಥಾನಮಾನ ಪಡೆದುಕೊಳ್ಳಬೇಕಾಗಿತ್ತು ಎಂದು ಹೇಳಿದರು.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹಂತಹಂತವಾಗಿ ಬದಲಾವಣೆ ಆಗುತ್ತದೆ. ಬಿಜೆಪಿಯಲ್ಲಿ ಲಿಂಗಾಯತರ ಕೋಟೆ ಭದ್ರವಾಗಿದೆ. ಯಡಿಯೂರಪ್ಪನವರು ನನ್ನ ಸಮೇತವಾಗಿ ಸಾಕಷ್ಟು ನಾಯಕರನ್ನು ಬೆಳೆಸಿದ್ದಾರೆ. ಕೆಲವರು ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ತಿಳಿಸಿದರು.

ಹಿಂದಿನ ಲೇಖನಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದ ವೀರಪ್ಪನ್ ಸಹಚರ ಸಾವು
ಮುಂದಿನ ಲೇಖನಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಾದೃಷ್ಟಕರ: ಸಿ.ಟಿ. ರವಿ