ಮನೆ Uncategorized ದೊಡ್ಡ ಬದಲಾವಣೆ ಇಲ್ಲ, ವರ್ಷಾಂತ್ಯದಲ್ಲಿ ಸಣ್ಣ ಬದಲಾವಣೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ದೊಡ್ಡ ಬದಲಾವಣೆ ಇಲ್ಲ, ವರ್ಷಾಂತ್ಯದಲ್ಲಿ ಸಣ್ಣ ಬದಲಾವಣೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

0

ಬೆಂಗಳೂರು : “ಸರಕಾರದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ. ಆದರೆ, ವರ್ಷಾಂತ್ಯದಲ್ಲಿ ಸಣ್ಣಪುಟ್ಟ ಬದಲಾವಣೆ ಆಗಲಿದೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ನಾನು ಪ್ರಯತ್ನ ನಡೆಸಿಲ್ಲ. ನಾನು ಪ್ರಯತ್ನ ನಡೆಸಿದರೆ ಮುಂದುವರೆಸಬಹುದು. ನಾನು ಎಲ್ಲಿ ಇದ್ದೇನೆಯೋ ಅಲ್ಲೇ ಇದ್ದೇನೆ ಎಂದು ತಿಳಿಸಿದರು. ಬಿ.ಆರ್.ಪಾಟೀಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆ ವಿಚಾರವೂ ದಿಲ್ಲಿಯಲ್ಲಿ ಚರ್ಚೆ ಆಗಿದೆ. ಈ ಬಗ್ಗೆ ಸಿಎಂ ಜೊತೆ ವರಿಷ್ಠರು ಮಾತನಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಜಲಸಂಪನ್ಮೂಲ ಇಲಾಖೆ ಅನುದಾನ ಸಂಬಂಧ ಶಾಸಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, `ನೀರಾವರಿ ಸಮಸ್ಯೆ ಬಗ್ಗೆ ಶಾಸಕ ರಾಜು ಕಾಗೆ ಮೊದಲಿನಿಂದಲೂ ಹೇಳುತ್ತಲೇ ಇದ್ದಾರೆ. ಇದು ಮುಖ್ಯಮಂತ್ರಿಗಳ ಅವರ ಗಮನಕ್ಕೂ ಬಂದಿದೆ. ಈ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಸಿಎಂ ಹೇಳುತ್ತಾರೆ’ ಎಂದು ತಿಳಿದರು.