ಮನೆ ರಾಷ್ಟ್ರೀಯ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಬ್ರಿಜ್ ಭೂಷಣ್

ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಬ್ರಿಜ್ ಭೂಷಣ್

0

ನವದೆಹಲಿ: ನಾನು ಮುಗ್ಧ, ಯಾವುದೇ ತಪ್ಪೂ ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ.

Join Our Whatsapp Group

ಮಹಿಳಾ ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕೇಳಿ ಬಂದಿದ್ದು, ಈ ಕುರಿತು ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷನ ವಿರುದ್ಧ ಕ್ರಮ ಕೈಗೊಳ್ಳದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ದೆಹಲಿ ಪೊಲೀಸರು ಇದೀಗ ಬ್ರಿಜ್ ಭೂಷಣ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಎಫ್ಐಆರ್ ದಾಖಲಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಅವರು, ಕುಸ್ತಿಪಟುಗಳ ಬೇಡಿಕೆಗಳು ಬದಲಾಗುತ್ತಲೇ ಇವೆ. ಮೊದಲಿಗೆ ಫೆಡರೇಶನ್ ಮುಖ್ಯಸ್ಥ ಸ್ಥಾನಕ್ಕೆ ನನ್ನ ರಾಜೀನಾಮೆಗೆ ಆಗ್ರಹಿಸಿದ್ದರು. ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದರೆ ಅದರ ಅರ್ಥ ಆರೋಪಗಳನ್ನು ಒಪ್ಪಿಕೊಂಡಾಗುತ್ತದೆ. ರಾಜೀನಾಮೆ ನೀಡುವುದು ದೊಡ್ಡ ವಿಶಯವಲ್ಲ. ನಾನು ಕ್ರಿಮಿನಲ್ ಅಲ್ಲ. ಎಫ್ಐಆರ್ ಪ್ರತಿ ಇನ್ನೂ ನನ್ನ ಕೈ ಸೇರಿಲ್ಲ. ಎಫ್ಐಆರ್ ಬಗ್ಗೆ ಪ್ರತಿ ಸಿಕ್ಕ ಬಳಿಕ ಮಾತನಾಡುತ್ತೇನೆಂದು ತಿಳಿಸಿದ್ದಾರೆ.

ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ ನಲ್ಲಿ ಪ್ರತಿಭಟನೆ ನಡೆಸುವುದಕ್ಕೂ ಮೊದಲು ಆರೋಪ ಪರಿಶೀಲಿಸಲು ನಿಯೋಜಿಸಲಾಗಿರುವ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ನ್ಯಾಯಾಂಗದ ನಿರ್ಧಾರ ಸಂತಸ ತಂದಿದೆ. ಎಫ್ಐಆರ್ ದಾಖಲಿಸಿರುವ ದೆಹಲಿ ಪೊಲೀಸರು, ಆರೋಪಗಳ ಬಗ್ಗೆ ತನಿಖೆ ನಡೆಸುತ್ತಾರೆ, ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ. ಈ ದೇಶದಲ್ಲಿ ನ್ಯಾಯಾಂಗಕ್ಕಿಂತ ಯಾರೂ ದೊಡ್ಡವರು ಯಾರೂ ಇಲ್ಲ. ನಾನು ಸುಪ್ರೀಂ ಕೋರ್ಟ್‌ ಗಿಂತ ದೊಡ್ಡವನಲ್ಲ. ಆದೇಶವನ್ನು ಸ್ವಾಗತಿಸುತ್ತೇನೆಂದು ಹೇಳಿದ್ದಾರೆ.

ಹಿಂದಿನ ಲೇಖನಸರಕು ಸಾಗಿಸುವ ಲಘು ವಾಹನಗಳಲ್ಲಿ ಜನರನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ:  ಆರ್ಷದೀಪ್
ಮುಂದಿನ ಲೇಖನಕ್ಷೇತ್ರದ ಗಣೇಶ ಬ್ಲಾಕ್ ನಲ್ಲಿ ಸಚಿವ ಕೆ.ಗೋಪಾಲಯ್ಯ ಬಿರುಸಿನ ಮತಯಾಚನೆ