ಮನೆ Uncategorized ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡ : ಪ್ರಮೋದಾದೇವಿ ಒಡೆಯರ್

ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡ : ಪ್ರಮೋದಾದೇವಿ ಒಡೆಯರ್

0

ಮೈಸೂರು(Mysuru):ನಗರದಿಂದ ಚಾಮುಂಡಿ ಬೆಟ್ಟಕ್ಕೆ (Chamundi hill) ಹೋಗಲು ಕೇವಲ 20ನಿಮಿಷ ಸಾಕು. ಹಾಗಾಗಿ ಪರಿಸರ ನಾಶ ಮಾಡಿ ರೋಪ್ ವೇ(Rope way) ಮಾಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್(Pramoda devi wodeyar) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂದು ಅರಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಳವಡಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಮೋದಾದೇವಿ ಒಡೆಯರ್, ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅವಶ್ಯಕತೆ ಇಲ್ಲ.  ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರವಾಗಿ ಉಳಿಯಬೇಕು. ಅದನ್ನ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಮಾಡಿದ್ರೆ ಪರಿಸರ ನಾಶವಾಗುತ್ತೆ ಎಂದು ಹೇಳಿದರು.

ಈಗಾಗಲೇ ಚಾಮುಂಡಿ ಬೆಟ್ಟದ ಪರಿಸರಕ್ಕೆ ಡ್ಯಾಮೇಜ್ ಆಗಿದೆ. ಇರುವುದನ್ನ ಉಳಿಸಿಕೊಳ್ಳಬೇಕಿದೆ. ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಮನೆ ಇಂದು ಇಡೀ ಗ್ರಾಮವಾಗಿದೆ. ಬೆಟ್ಟದ ಮೇಲೆಯೇ ನಗರ ಪ್ರದೇಶ ನಿರ್ಮಾಣವಾಗುತ್ತಿದೆ. ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಆಲ್ಲಿ ಕಮರ್ಷಿಯಲ್ ಮಳಿಗೆಗಳ ಅವಶ್ಯಕತೆಯೂ ಇಲ್ಲ. ಮೂಲಭೂತ ಸೌಕರ್ಯಗಳ ನೀಡಿದ್ರೆ ಸಾಕು ಎಂದು ಪ್ರಮೋದಾ ದೇವಿ ಒಡೆಯರ್ ಹೇಳಿದರು.

ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಸದ್ಯದಲ್ಲೇ ಒಪನ್ :

ಚಾಮುಂಡಿ ಬೆಟ್ಟದ ಮೇಲಿನ ರಾಜೇಂದ್ರ ವಿಲಾಸ ಅರಮನೆ ಪುನಶ್ಚೇತನ ಕಾಮಗಾರಿ ಭರದಿಂದ ಸಾಗುತ್ತಿದ್ದು, ಸದ್ಯದಲ್ಲೇ ಪ್ರವಾಸಿಗರ ಬಳಕೆಗೆ ಮುಕ್ತವಾಗಲಿದೆ ಎಂದು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹೇಳಿದರು.

ಬೆಟ್ಟದ ಮೇಲೆ 120 ಅಡಿ ಎತ್ತರದಲ್ಲಿರೋ ರಾಜೇಂದ್ರ ವಿಲಾಸ ಅರಮನೆ ಬಹಳ‌ ದಿ‌ನಗಳಿಂದ ಪ್ರವಾಸಿಗರಿಗೆ ಮುಚ್ಚಿತ್ತು. ಇದೀಗ ರಾಜೇಂದ್ರ ವಿಲಾಸ ಪುನಶ್ಚೇತನ ಕಾಮಗಾರಿ ಆರಂಭವಾಗಿದ್ದು, ತಜ್ಞರ ಅಭಿಪ್ರಾಯ‌ ಪಡೆದು ನವೀಕರಣ ಕಾರ್ಯ ಮಾಡಲಾಗುತ್ತಿದೆ. ಅರಮನೆಯ ಪುರಾತನ ಪಾರಂಪರಿಕ ಶೈಲಿಯಲ್ಲೇ ನವೀಕರಣ ಕಾರ್ಯ ಮಾಡಲಾಗುವುದು.. ಗೋಪುರದ ನವೀಕರಣ ಮಾಡುವುದು ಬಹಳ ಸವಾಲಾಗಿತ್ತು. ಎಲ್ಲವೂ ಒಂದು ಹಂತಕ್ಕೆ ಬಂದು ನಿಂತಿದೆ. ಮತ್ತೆ ಹೋಟೆಲ್ ಆಗಿ ಮುಂದುವರೆಸುವ ಉದ್ದೇಶವಿದೆ ಎಂದು ಹೇಳಿದರು.

ನವೀಕರಣ ಕಾಮಗಾರಿಯ ಚಿತ್ರಗಳನ್ನು ಪ್ರದರ್ಶಿಸಿ ವಿವರ ನೀಡಿದ ಪ್ರಮೋದಾದೇವಿ ಒಡೆಯರ್. 1975 ರಿಂದ ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಆಗಿ ನಡೆಯುತ್ತಿತ್ತು. ನಂತರ 1995 ರಲ್ಲಿ ರಾಜೇಂದ್ರ ವಿಲಾಸ ಅರಮನೆ ಮುಚ್ಚಲ್ಪಟ್ಟಿತ್ತು ಎಂದು ಮಾಹಿತಿ ನೀಡಿದರು.