ಮನೆ ಕಾನೂನು ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ: ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ

ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ: ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ

0

ನವದೆಹಲಿ: ಗೌರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಹೇಳಿದೆ.

Join Our Whatsapp Group

ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ ‘ಸು ಮೋಟೊ’ (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧದ ‘ಸು ಮೋಟೊ’ ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿತ್ತು.

ಇದೀಗ ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

ಅಂತೆಯೇ ಈ ವೇಳೆ “ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ‘ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹೇಳಿದ್ದಾರೆ.

ಅಲ್ಲದೆ “ನ್ಯಾಯ ಮತ್ತು ನ್ಯಾಯಾಂಗದ ಘನತೆಯ ಹಿತಾಸಕ್ತಿಯಿಂದಾಗಿ ‘ಸು ಮೋಟೊ’ ಪ್ರಕರಣವನ್ನು ಮುಕ್ತಾಯಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ. ಅಂತಹ ಅವಲೋಕನಗಳು ಪಕ್ಷಪಾತದಿಂದಕೂಡಿರಬಾರದು. ಎಲ್ಲರನ್ನು ಒಳಗೊಳ್ಳುವಂತಿರಬೇಕು” ಎಂದು ಸಿಜೆಐ ಹೇಳಿದ್ದಾರೆ.