ಮನೆ ರಾಜ್ಯ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ  ಹಬ್ಬ ಆಚರಣೆಗೆ ಅವಕಾಶವಿಲ್ಲ: ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ  ಹಬ್ಬ ಆಚರಣೆಗೆ ಅವಕಾಶವಿಲ್ಲ: ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ

0

ಬೆಂಗಳೂರು(Bengaluru): ರಾಜಧಾನಿ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಚಾಮರಾಜ ಪೇಟೆ ಶಾಸಕ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ತ್ರಿವರ್ಣ ಧ್ವಜಾರೋಹಣ, ಜನವರಿ 26ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶ ಇದೆ ಎಂದು ಹೇಳಿದ್ದಾರೆ.

ಈದ್ಗಾ ಮೈದಾನ ಕಂದಾಯ ಇಲಾಖೆ ಸ್ವತ್ತು ಎಂದು ಈಗಾಗಲೇ ಬಿಬಿಎಂಪಿ ಹೇಳಿದೆ. ಆದ್ರೆ, ಇದು ನಮ್ಮ ಸ್ವತ್ತು ಎಂದು ರಾಜ್ಯ ವಕ್ಫ್‌ ಬೋರ್ಡ್‌ ವಾದಿಸುತ್ತಿದೆ. ಇಷ್ಟಾದ್ರೂ ಇದು ಕಾನೂನು ವಿಚಾರವಾಗಿದ್ದು, ಅದನ್ನು ವಕ್ಫ್‌ ಬೋರ್ಡ್‌ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ರಾಜ್ಯಾದ್ಯಂತ ವಕ್ಫ್‌ ಹಾಗೂ ಮುಜರಾಯಿ ಆಸ್ತಿಗಳೆಲ್ಲವೂ 1999ಕ್ಕೆ ಮುನ್ನ ಕಂದಾಯ ಇಲಾಖೆ ವ್ಯಾಪ್ತಿಯಲ್ಲೇ ಇತ್ತು. ನಂತರ ಎಸ್‌. ಎಂ. ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಇದರ ವಿಂಗಡಣೆ ಆಗಿತ್ತು ಎಂದು ಮಾಹಿತಿ ನೀಡಿದರು.

ಇನ್ನು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲಾಗುತ್ತಿತ್ತು. ಈ ಪರಿಪಾಠವನ್ನು ಪ್ರತಿ ವರ್ಷ ಮುಂದುವರೆಸಲಾಗುವುದು. ಶಾಲಾ – ಕಾಲೇಜಿನ ವಿದ್ಯಾರ್ಥಿಗಳನ್ನು ಸೇರಿಸಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಸಲಾಗುವುದು ಎಂದು ಜಮೀರ್ ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಹೆಚ್ಚಾಗಿದೆ: ಸಿದ್ದರಾಮಯ್ಯ
ಮುಂದಿನ ಲೇಖನಆರೋಪಿಗಳಿಗೆ ಸಿಆರ್‌ಪಿಸಿ ಸೆಕ್ಷನ್ 313ರಡಿ ಅವಕಾಶ ನೀಡದಿರುವುದು ಗಂಭೀರ ತಾರತಮ್ಯ ಉಂಟು ಮಾಡಬಹುದು: ಸುಪ್ರೀಂ ಕೋರ್ಟ್