ಮನೆ ರಾಜಕೀಯ ಕರ್ನಾಟಕ ಅಭಿವೃದ್ಧಿ ಬಗ್ಗೆ ಯಾವ ರಾಜಕಾರಣಿಗೂ ದೂರದೃಷ್ಟಿ ಇಲ್ಲ: ಭಾಸ್ಕರ್ ರಾವ್

ಕರ್ನಾಟಕ ಅಭಿವೃದ್ಧಿ ಬಗ್ಗೆ ಯಾವ ರಾಜಕಾರಣಿಗೂ ದೂರದೃಷ್ಟಿ ಇಲ್ಲ: ಭಾಸ್ಕರ್ ರಾವ್

0

ಹುಬ್ಬಳ್ಳಿ (Hubballi):  ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಯಾವ ಒಬ್ಬ ರಾಜಕಾರಣಿಗೂ ದೂರದೃಷ್ಟಿ ಇಲ್ಲ ಎಂದು  ಆಮ್, ಆದ್ಮಿ  ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದರು.

ವಿಕಾಸ ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಸ್ವಪ್ರತಿಷ್ಠೆ ಯನ್ನು ರಾಜಕೀಯದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಇದರ ಪರಿಣಾಮವಾಗಿ ಪರ್ಯಾಯ ವ್ಯವಸ್ಥೆ ಬಗ್ಗೆ ಜನ ಒಲವು ತೋರುತ್ತಿದ್ದಾರೆ. ಆದ ಕಾರಣ ಈ ಬಾರಿ ಪಂಜಾಬ್ ಮಾದರಿಯಲ್ಲಿ ಭರ್ಜರಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ತಿಳಿಸಿದರು.

  ಎಎಪಿ ಪಕ್ಷವನ್ನು ಹಳ್ಳಿ ಹಳ್ಳಿಗಳಲ್ಲಿ ಸಂಘಟಿಸಲಾಗುತ್ತಿದೆ. ಯುವ, ಮಹಿಳಾ ಘಟಕ ಸೇರಿದಂತೆ ಹತ್ತು ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಸಾಮಾನ್ಯ ಜನರಿಗೆ ಜವಾಬ್ದಾರಿ ಅವಕಾಶ ನೀಡಲಾಗುತ್ತಿದೆ ಎಂದರು.

ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಸ್ಪರ್ಧಿಸುತ್ತೇನೆ. ನಾನು ರಾಜ್ಯದ ವಿವಿಧೆಡೆ ಪೊಲೀಸ್ ಅಧಿಕಾರಿಯಾಗಿ ರಾಜಕಾರಣೆಗಳನ್ನು ಹತ್ತಿರದಿಂದ ನೋಡಿದ್ದೇನೆ. ಈ ವ್ಯವಸ್ಥೆ ಕಿತ್ತೆಸೆಯಲು ಇಲ್ಲಿಗೆ ಬಂದಿದ್ದೇನೆ ಜನ ನಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ. ಎಂದರು.

ಪಕ್ಷದ ಜಿಲ್ಲಾ ಅಧ್ಯಕ್ಷ ಅನಂತಕುಮಾರ ಬುಗಡಿ, ಪ್ರಧಾನ ಕಾರ್ಯದರ್ಶಿ ವಿಕಾಸ ಸೊಪ್ಪಿನ ಹಾಗೂ ಜಿಲ್ಲಾ ಸಂಚಾಲಕ ಅರವಿಂದ್ ಎಂ. ಇದ್ದರು.