ಮಂಡ್ಯ: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಹೋರಾಡಬೇಕು ಎಂದು ಹೇಳಿದರು.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ನಾಡು, ನುಡಿ, ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು ರಾಜ್ಯದ ರೈತರು ಜನರಿಗೆ ಸಮಸ್ಯೆಯಾದರೆ ಎಲ್ಲರೂ ಒಂದಾಗಬೇಕು. ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದರು.
ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ 4 ವರ್ಷ ಉತ್ತಮ ಮಳೆಯಾಗಿತ್ತು. ಈ ವರ್ಷ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ಹೀಗಾಗಿ ನೀರಿನ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಕಾವೇರಿ ನೀರು ಪ್ರಾಧಿಕಾರಕ್ಕೆ ಮನವರಿಕೆ ಮಾಡಬೇಕು. ಮಳೆ ಕೊರತೆಯಿಂದ ರೈತರು ಜನರ ಸಮಸ್ಯೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ ಎಂದರು.
ಕಾಂಗ್ರೆಸ್ ನಿಂದ ಆಫರ್ ವಿಚಾರ ಕುರಿತು ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇದೆಲ್ಲಾ ಊಹಾಪೋಹ ರಾಜಕೀಯ ನನಗೆ ಅನಿವಾರ್ಯ ಅಲ್ಲ, ಆಕಸ್ಮಿಕ ಎಂದರು.